ಬೆಂಗಳೂರುಸತ್ಯ ವಿಸ್ಮಯ ಪತ್ರಿಕೆ
ಗ್ರಾಮ ಪಂಚಾಯಿತಿಗಳಲ್ಲಿ ವಿವಾಹ ನೊಂದಾಣಿ ಸೇವೆ ಲಭ್ಯ.

ಬೆಂಗಳೂರು:- ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ)ವಿವಾಹ ನೋಂದಣಿ ಅಧಿಕಾರ ನೀಡಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಮಾಡಿದೆ. ಇದರಿಂದಾಗಿ ಇನ್ನು ಮುಂದೆ ವಿವಾಹಿತರು ತಮ್ಮ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯಲು ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಡುವುದು ತಪ್ಪಲಿದೆ. ಪಿಡಿಒಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿವಾಹ ನೋಂದಣಿ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಬಗ್ಗೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲೆ ಪ್ರಸ್ತಾಪವಾಗಿತ್ತು. ಆದರೆ ಕಾರಣಾಂತರಗಳಿಂದ ಅದು ಹಾಗೆ ಉಳಿದಿತ್ತು. ನಂತರ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರ ನೇತೃತ್ವದಲ್ಲಿ ನಡೆದ ಇತ್ತೀಚಿನ ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ದೊರತಿತ್ತು. ಅದರಂತೆ ಈಗ ಆದೇಶ ಹೊರಬಿದ್ದಿದೆ.
ವರದಿ:- ಜಗದೀಶ್ ಹೆಚ್ ಬೆಂಗಳೂರು ನಗರ