ತುಮಕೂರುಸತ್ಯ ವಿಸ್ಮಯ ಪತ್ರಿಕೆ

ಜಾಗತೀಕರಣ ಸಮಾಜದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ : ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ರಘು ಕಳವಳ.

ಗುಬ್ಬಿ: ವೈಜ್ಞಾನಿಕವಾಗಿ ಬೆಳೆದಂತೆ ಸಮಾಜದಲ್ಲಿ ಸಂವಿಧಾನ ಬದ್ದ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಈ ಪೈಕಿ ಮಾನವ ಹಕ್ಕುಗಳ ಉಲ್ಲಂಘನೆ ತೀವ್ರ ಸಮಸ್ಯೆಯೊಡ್ಡಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಗೃತಿ ಮೂಡಿಸಿ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕೆಲಸ ನಮ್ಮ ಸಮಿತಿ ಮಾಡಲಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ರಘು ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ಪದಾಧಿಕಾರಿಗಳ ನೇಮಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ದೀನ ದಲಿತರ ಹಾಗೂ ರೈತರ ಮೇಲೆ ನಿರಂತರ ಶೋಷಣೆ ಆಗುತ್ತಿದೆ. ಸಂವಿಧಾನ ನೀಡಿದ ಎಲ್ಲಾ ಹಕ್ಕುಗಳ ಅನುಷ್ಠಾನ ಆಗುತ್ತಿಲ್ಲ. ಈ ಬಗ್ಗೆ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಮೂಡಿಸಿ ಸಮಿತಿ ಮೂಲಕ ಹೋರಾಟ ನಡೆಸಲು ಮುಂದಾಗಬೇಕು ಎಂದು ಕರೆ ನೀಡಿದರು.ಮಾನವ ಹಕ್ಕುಗಳ ಆಯೋಗವು ಸಮರ್ಪಕ ಕೆಲಸ ಮಾಡುತ್ತಿಲ್ಲ. ಸರ್ಕಾರಗಳು ಸಹ ಇಚ್ಚಾಶಕ್ತಿ ಕಳೆದುಕೊಂಡಿದೆ. ಇದೇ ಸಂದರ್ಭದಲ್ಲಿ ಭಯೋತ್ಪಾದನೆ, ಉಗ್ರಗಾಮಿತನ ಅಂತಹ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿವೆ. ಈ ಜೊತೆಗೆ ಅತಿಯಾದ ವ್ಯಾಪಾರೀಕರಣ ಹಾಗೂ ಸಾಂಸ್ಕೃತಿಕ ದಿವಾಳಿತನ ಎಲ್ಲವೂ ನಮ್ಮ ಆರೋಗ್ಯ ಸಮಾಜವನ್ನು ಹಾಳು ಮಾಡುತ್ತದೆ. ಈ ಸಂದಿಗ್ದ ಸಮಯದಲ್ಲಿ ಸಜ್ಜನರು ಮೌನ ಮುರಿದು ಹೋರಾಟಕ್ಕೆ ಧುಮುಕಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಮಾಹಿತಿ ಸಮಿತಿಯ ರಾಜ್ಯಾಧ್ಯಕ್ಷ ಹನುಮಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ವೆಂಕಟೇಶ್, ರಾಜ್ಯ ಜಂಟಿ ಕಾರ್ಯದರ್ಶಿ ಕೃಷ್ಣ, ಜಿಲ್ಲಾಧ್ಯಕ್ಷ ಶ್ರೀಧರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಲಾವಣ್ಯ, ಗುಬ್ಬಿ ತಾಲ್ಲೂಕು ಅಧ್ಯಕ್ಷ ಶೇಕ್ ಅನ್ಸರ್, ತಿಪಟೂರು ತಾಲ್ಲೂಕು ಅಧ್ಯಕ್ಷ ಫೈರೋಜ್, ಮಹಿಳಾ ಘಟಕ ತಾಲ್ಲೂಕು ಅಧ್ಯಕ್ಷೆ ಶಹಾಬುದ್ದೀನ್ ಇತರರು ಇದ್ದರು.

ವರದಿ: ರಾಘವೇಂದ್ರ ಗುಬ್ಬಿ

Related Articles

Leave a Reply

Your email address will not be published.

Back to top button
protected