ಬೆಂಗಳೂರು ಗ್ರಾಮಾಂತರ ಜಿಲ್ಲೆಸತ್ಯ ವಿಸ್ಮಯಸತ್ಯ ವಿಸ್ಮಯ ಪತ್ರಿಕೆ

ರಾಜಕಾರಣದಲ್ಲಿ ಅಪರೂಪದ ಅಜಾತಶತ್ರು ಮಲ್ಲಿಕಾರ್ಜುನ್ ಖರ್ಗೆಹೂ ಮತ್ತು ಆಪಲ್ ಬೃಹತ್ ಹಾರ ಹಾಕಿ ಅದ್ದೂರಿ ಸ್ವಾಗತ | ಕಾರ್ಯಕರ್ತರತ್ತ ಕೈಬೀಸಿದ ಖರ್ಗೆ

ದೇವನಹಳ್ಳಿ: ರಾಜಕಾರಣದಲ್ಲಿ ಅಪರೂಪದ ಅಜಾತಶತ್ರು ಮತ್ತು ಸರ್ವ ಜನಾಂಗ ಪ್ರೀತಿಸುವ ದೀಮಂತ ನಾಯಕ ರಾಷ್ಟ್ರೀಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಾಗಿದ್ದಾರೆ ಎಂದು ಮಾಜಿ ಶಾಸಕ ಮುನಿನರಸಿಂಹಯ್ಯ ತಿಳಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಸಾದಹಳ್ಳಿ ಗೇಟ್‌ನ ಟೋಲ್ ಬಳಿಯಲ್ಲಿ ದೆಹಲಿಯಿಂದ ಆಗಮಿಸಿ, ದೇವನಹಳ್ಳಿ ಮಾರ್ಗವಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ಗೆ ತೆರಳುವ ಮಧ್ಯೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಅಭಿನಂದನಾ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಐಸಿಸಿ ಅಧ್ಯಕ್ಷರಾದ ನಂತರ ಮೊಟ್ಟಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಕ್ಷೇತ್ರದ ಪರವಾಗಿ ಅಭಿನಂದಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಜನಸ್ತೋಮ ಕಂಡುಬಂದಿರುವುದು ಮುಂಬರುವ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದು ಹೇಳಿದರು.


ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣಭೈರೇಗೌಡ ಮಾತನಾಡಿ,ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸ್ವಾಗತಿಸಲು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಶಾಸಕರುಗಳಿಗೆ ಸ್ವಾಗತ ಹಾಗೂ ದನ್ಯವಾದಗಳನ್ನು ಅರ್ಪಿಸುತ್ತೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇಲ್ಲದಿದ್ದರೂ ಸಹ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಎಲ್ಲರೂ ಬಂದಿರುವುದಕ್ಕೆ ಧನ್ಯವಾದಗಳು. ಕೆಪಿಸಿಸಿ ಎಸ್‌ಸಿ ವಿಭಾಗದಿಂದ ನಾಯಕರು ಸಹ ಬಂದಿದ್ದು, ಕಾಂಗ್ರೆಸ್‌ನ ಅನೇಕ ಕಾರ್ಯಕರ್ತರು ಎಲ್ಲರೂ ಬಂದಿದ್ದೀರುವುದು ಸಂತಸದ ವಿಷಯವಾಗಿದೆ ಎಂದರು.
ವಿಮಾನ ನಿಲ್ದಾಣದಲ್ಲಿ ಸ್ವಾಗತ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ರಣದೀಪ್ ಸರ್ಜಿವಾಲ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣಭೈರೇಗೌಡ ಸೇರಿದಂತೆ ಹಲವಾರು ರಾಜ್ಯದ ನಾಯಕರುಗಳು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಸ್ವಾಗತಿಸಿದರು.


ಕಾರ್ಯಕರ್ತರತ್ತ ಕೈಬೀಸಿದ ಮಲ್ಲಿಕಾರ್ಜುನ್ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವೇದಿಕೆ ಮೇಲೆ ಹತ್ತುತ್ತಿದ್ದಂತೆ, ಸಹಸ್ರಾರು ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರತ್ತ ಕೈಬೀಸುವುದರ ಮೂಲಕ ಸಂತಸ ವ್ಯಕ್ತಪಡಿಸಿದ್ದು ಗಮನಸೆಳೆಯಿತು.
ಕ್ರೇನ್, ಜೆಸಿಬಿ ಮೂಲಕ ಹೂವಿನ ಸುರಿಮಳೆ
ಸಾದಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ೭ರ ಟೋಬ್‌ಬಳಿ ಖರ್ಗೆ ಅವರ ಸ್ವಾಗತಕ್ಕೆ ಮೂರ್‍ನಾಲ್ಕು ಕ್ರೇನ್ ಮತ್ತು ಜೆಸಿಬಿಗಳ ಮೂಲಕ ಹೂಗಳನ್ನು ಚೆಲ್ಲುವುದರ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ಕ್ರೇನ್‌ಗಳಲ್ಲಿ ಬೃಹತ್‌ಗಾತ್ರ ಸೇಬಿನ ಹಾರ ಮತ್ತು ಹೂವಿನ ಹಾರವನ್ನು ಹಾಕುವುದರ ಮೂಲಕ ಗೌರವಿಸಿ, ಬರಮಾಡಿಕೊಂಡರು. ಪೋಲೀಸ್ ಬಿಗಿಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರಿಂದ ಕೆಲ ಕಾಲ ವಾಹನ ಸಂಚಾರ ದಟ್ಟನೆ ಕಂಡುಬಂತು. ಕಾರ್ಯಕರ್ತರು ಮತ್ತು ಮುಖಂಡರು ಕಾಂಗ್ರೆಸ್ ಜೈಕಾರಗಳನ್ನು ಕೂಗುತ್ತ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು.


ಇದೇ ಸಂದರ್ಭದಲ್ಲಿ ಹೊಸಕೋಟೆ ಶಾಸಕ ಶರತ್‌ಬಚ್ಚೇಗೌಡ, ದೊಡ್ಡಬಳ್ಳಾಪರು ಶಾಸಕ ವೆಂಕಟರಮಣಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ಮುನಿನರಸಿಂಹಯ್ಯ, ವೆಂಕಟಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್, ಶಾಸಕ ಆಕಾಂಕ್ಷಿಗಳಾದ ಶೆಟ್ಟಿಗೆರೆ ರಾಜಣ್ಣ, ಆನಂದ್‌ಕುಮಾರ್, ಚಂದ್ರಣ್ಣ(ಚಿಕ್ಕಣ್ಣ), ಚಿನ್ನಪ್ಪ, ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಲೋಕೆಶ್, ತಾಲೂಕು ಅಧ್ಯಕ್ಷ ಕೆ.ವಿ.ಸ್ವಾಮಿ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ನವರತ್ನಅಗ್ರಹಾರ ಮಹೇಶ್, ಶಿಢ್ಲಘಟ್ಟ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ರಾಜೀವ್‌ಗೌಡ, ದೇವನಹಳ್ಳಿ ಬ್ಲಾಕ್‌ನ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಲಕ್ಷ್ಮೇಗೌಡ, ನಾಗೇಗೌಡ, ನಾಗೇಶ್, ಸುಮಂತ್, ಸುಧಾಕರ್, ಮುನಿಆಂಜಿನಪ್ಪ, ಸಾಗರ್, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ವರದಿ:ಹರ್ಷಪಿ ಸತ್ಯ ವಿಸ್ಮಯ ಪತ್ರಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 107