ಚಿಕ್ಕಬಳ್ಳಾಪುರಸತ್ಯ ವಿಸ್ಮಯ ಪತ್ರಿಕೆ

ಪಂಚರತ್ನ ಯಾತ್ರೆ ಯಶಸ್ವಿಗೊಳಿಸಿ ಕುಮಾರಸ್ವಾಮಿಗೆ ಬಲತುಂಬಿ :ಮುದ್ದಲಪಲ್ಲಿ ರಾಜಾರೆಡ್ಡಿ

ಬಾಗೇಪಲ್ಲಿ, ನ. 23 :- ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆಯು ಐತಿಹಾಸಿಕ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಜೆಡಿಎಸ್ ಯುವ ಬ್ರಿಗೇಡ್ ನ ರಾಜ್ಯ ಸಂಘಟನಾ ಕಾರ್ಯದರ್ಶಿ ಮುದ್ದಲಪಲ್ಲಿ ರಾಜಾರೆಡ್ಡಿ ತಿಳಿಸಿದರು.ಪತ್ರಿಕಾ ಹೇಳಿಕೆ ನೀಡಿದ ಅವರು ಇದೇ ತಿಂಗಳ 25 ರಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕುಗಳಲ್ಲಿ ನಡೆಯಲಿರುವ ರೋಡ್ ಷೋ ಹಾಗೂ ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಬಳಿ ನಡೆಯಲಿರುವ ಬಹಿರಂಗ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಬೇಕು. ಶಿಕ್ಷಣ, ಆರೋಗ್ಯ, ರೈತರ ಅಭಿವೃದ್ಧಿ, ಉದ್ಯೋಗ, ಮಹಿಳೆಯರ ಹಿತಕ್ಕೆ ಪಂಚರತ್ನದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಅಂಶಗಳ ಆಧಾರದಲ್ಲಿ ಈ ಯಾತ್ರೆ ರಾಜ್ಯದ ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲಿ ನಡೆಯಲಿದ್ದು ಮುಂದಿನ 2023 ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರಿಗೆ ಬಲತುಂಬಬೇಕು.

ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಿಂದಾಗಿ ಕಾರ್ಯಕರ್ತರು ಕೆಲಸ ಮಾಡಲು ಮತ್ತಷ್ಟು ಹುಮ್ಮಸ್ಸು ಹೆಚ್ಚಾಗುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಜನ ಸೇರಬೇಕು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ಗ್ರಾಮದಲ್ಲಿ ನವೆಂಬರ್ 25 ರಂದು ಬೆಳಗ್ಗೆ 10 ಗಂಟೆಗೆ ಪಂಚರತ್ನ ಯಾತ್ರೆ ಪ್ರಾರಂಭವಾಗಿ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದ ಬಳಿ ಸಂಜೆ 5 ಗಂಟೆಗೆ ಬಹಿರಂಗ ಸಭೆ ನಡೆಸಲಿದ್ದಾರೆ. ನಂತರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬೀಚಗಾನಹಳ್ಳಿ ಗ್ರಾಮದ ಬಳಿಯ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳನ್ನು ಅಲಿಸಿ ಅಹವಾಲು ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಈ ಕಾರ್ಯಕ್ರಮದ ಮೂಲಕ ಜನಕ್ಕೆ ಅರಿವು ಮೂಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ವರದಿ: ಶಾಂತಿ ಚಿಕ್ಕಬಳ್ಳಾಪುರ ಜಿಲ್ಲೆ

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 107