ತುಮಕೂರುಸತ್ಯ ವಿಸ್ಮಯ ಪತ್ರಿಕೆ

2023 ವಿಧಾನಸಭಾ ಚುನಾವಣೆ: ನಾನೂ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ: ಎನ್.ಆರ್.ಜಯರಾಮ್

ತುರುವೇಕೆರೆ: ಮುಂಬರುವ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಆಶಯವಿದ್ದು, ಪಕ್ಷದ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಎನ್.ಆರ್. ಜಯರಾಮ್ ತಿಳಿಸಿದರು.ತಾಲ್ಲೂಕಿನ ಮಾಯಸಂದ್ರ ಗ್ರಾಮದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ‌ ನಾನು ಜನಸಾಮಾನ್ಯರ ಕಷ್ಟಸುಖಗಳನ್ನು ಹತ್ತಿರದಿಂದ ಕಂಡಿದ್ದೇನೆ. ಕಳೆದ ಮೂರು ದಶಕಗಳಿಂದ‌ ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ‌ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿದ್ದೇನೆ. ಕ್ಷೇತ್ರದ ಜನತೆ ಮನೆಮಗನಂತೆ ಪ್ರೀತಿಸುವಷ್ಟು ಚಿರಪರಿಚಿತನಾಗಿದ್ದೇನೆ.

ಕ್ಷೇತ್ರದ ಎಲ್ಲಾ ಹೋಬಳಿ, ಗ್ರಾಮದ ಭೌಗೋಳಿಕ ಲಕ್ಷಣ, ಸಾಮಾಜಿಕ ಸ್ಥಿತಿಗತಿಗಳ, ಜನರ ಸಂಕಷ್ಟಗಳ ಬಗ್ಗೆ, ಗ್ರಾಮದ ಸಮಸ್ಯೆಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ಅರಿತಿದ್ದೇನೆ.‌ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ದೊಡ್ಡಮಟ್ಟದ ರಾಜಕೀಯ ಶಕ್ತಿ ಅಗತ್ಯವೆಂಬುದನ್ನು ಮನಗಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದರು.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ನಾಯಕರ ಮಾರ್ಗದರ್ಶನದಂತೆ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸುತ್ತಾ ಬಂದಿದ್ದೇನೆ. ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹೊಸಬರನ್ನು ಸೇರ್ಪಡೆಗೊಳಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದೇನೆ ಎಂದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಲು ಇಚ್ಛಿಸಿದ್ದು, ಟಿಕೆಟ್ ಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದರು.ಮುನಿಯೂರು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯನಾಗಿ ಆ ಭಾಗದಲ್ಲಿ ಅನೇಕ‌ ಜನಪರವಾದ ಅಭಿವೃದ್ಧಿ ಕೆಲಸ ಮಾಡಿದ ತೃಪ್ತಿ ನನಗಿದೆ.

ಅತ್ತಿಕುಳ್ಳೆಪಾಳ್ಯದ ಶ್ರೀ ಶನೇಶ್ವರ ರಿಲಿಜಿಯಸ್ ಟ್ರಸ್ಟ್ ಅಧ್ಯಕ್ಷನಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷರಾಗಿ, ಮಾಯಸಂದ್ರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದೇನೆ ಎಂದ ಅವರು, ಕ್ಷೇತ್ರದಲ್ಲಿ ಎಲ್ಲಾ ಜಾತಿ, ಧರ್ಮದವರೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದು, ಎಲ್ಲಾ ವರ್ಗದವರ ವಿಶ್ವಾಸಕ್ಕೆ ಪಾತ್ರನಾಗಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ಪಕ್ಷ ನಿಷ್ಠೆ, ಜನಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದ್ದೇ ಆದಲ್ಲಿ ಕ್ಷೇತ್ರದ ಜನರ ಆಶೀರ್ವಾದದಿಂದ ಜಯ ಸಾಧಿಸಲಿದ್ದೇನೆ ಎಂದರು.ಮುಂದಿನ ದಿನಗಳಲ್ಲಿ ರಾಜಕೀಯ ಸ್ಥಿತ್ಯಂತರ ಏನೇ ಆದರೂ‌ ಕಾಂಗ್ರೆಸ್ ಪಕ್ಷದಲ್ಲೇ ಇಂದು ಪಕ್ಷವನ್ನು ಸಂಘಟನಾತ್ಮಕವಾಗಿ ಪಕ್ಷವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟುತ್ತೇನೆ. ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಹಾಗೂ ಇಲ್ಲಿನ ಜನರ ಸೇವೆ ಮಾಡುತ್ತೇನೆ ಎನ್ನುವ ಮೂಲಕ ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡದೆ ಸ್ಥಳೀಯರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಪರೋಕ್ಷವಾಗಿ ಒತ್ತಾಯಿಸಿದರು.ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದು, ಪಕ್ಷ ಟಿಕೆಟ್ ನೀಡುವ ವಿಶ್ವಾಸವಿದೆ.

ಕ್ಷೇತ್ರದಲ್ಲಿ ಸಾಕಷ್ಟು ಮಂದಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಹಿರಿಯರು, ಕಿರಿಯರು ಎಲ್ಲರಿದ್ದು, ಅವರೆಲ್ಲರೂ ನನ್ನನ್ನು ಬೆಂಬಲಿಸುವ ನಂಬಿಕೆಯಿದೆ ಎಂದರು.ಈ ಸಂದರ್ಭದಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಹರಳಕೆರೆ ಮಹಲಿಂಗಯ್ಯ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಜವರೇಗೌಡ, ತಾಪಂ ಮಾಜಿ ಸದಸ್ಯರಾದ ನಂಜೇಗೌಡ, ಮಂಜುನಾಥ್ , ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಗ್ರಾಪಂ ಮಾಜಿ ಸದಸ್ಯರಾದ ಮೋಹನ್, ಯತೀಶ್, ತಿಮ್ಮೇಗೌಡ, ಸೀಗೇಹಳ್ಳಿ ಸುರೇಶ್, ನಾರಾಯಣ್, ಶಾಂತರಾಜು, ರಾಧಾಕೃಷ್ಣ, ಸವಿತಾಶಿವಕುಮಾರ್, ನಂಜಾಮರಿ, ಗುಡ್ಡೇನಹಳ್ಳಿ‌ ಕೆಂಚಣ್ಣ, ಕಲ್ಲುನಾಗತಿಹಳ್ಳಿ ಬಾಬಣ್ಣ, ಮುಖಂಡರಾದ ಅಶೋಕ್ ಕುಮಾರ್, ಜವರಪ್ಪ, ಮೂರ್ತಿ, ಬೇಗ್ ಮುಂತಾದವರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 107