ತುಮಕೂರುಸತ್ಯ ವಿಸ್ಮಯ ಪತ್ರಿಕೆ

14 ವರ್ಷದೊಳಗಿನ ಹ್ಯಾಂಡ್ ಬಾಲ್ ಸ್ಪರ್ಧೆ: ಎಸ್.ಬಿ.ಜಿ. ಶಾಲೆಯ 3 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ತುರುವೇಕೆರೆ: ಚಿತ್ರದುರ್ಗದಲ್ಲಿ ನಡೆದ 14 ವರ್ಷದೊಳಗಿನ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ತಾಲ್ಲೂಕಿನ ಎಸ್.ಬಿ.ಜಿ. ಶಾಲೆಯ 3 ಮಂದಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ್ ತಿಳಿಸಿದರು.ಬಿ.ಆರ್.ಸಿ. ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ತುರುವೇಕೆರೆ ತಾಲ್ಲೂಕಿನ 3 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇಲಾಖೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ನಿಟ್ಟಿನಲ್ಲಿ ಅತ್ಯುತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಉದಯ್ ಕುಮಾರ್, ಚಿರಂಜೀವಿ, ಶಾಲೆಯ ಮುಖ್ಯ ಶಿಕ್ಷಕರಾದ ಗಿರೀಶ್, ಮಯೂರ ಶಾಲೆಯ ಜಯದೇವಮೂರ್ತಿ ಅವರನ್ನು ಸಹ ಅಭಿನಂದಿಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಲಾಸ್ ಗೌಡ, ಧನುಷ್ ಗೌಡ, ಗಗನ್, ಹೃತಿಕ್ ಎಸ್.ಗೌಡ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮೋನಿತ್ ಗೌಡ, ಧನವಂತ್ ಗೌಡ, ನಿಶ್ಚಯ್ ಕೆ.ಗೌಡ ಹಾಗೂ ಮುಖ್ಯೋಪಾಧ್ಯಾಯರಾದ ಜಯದೇವಮೂರ್ತಿ, ಗಿರೀಶ್, ತರಬೇತುದಾರರಾದ ಉದಯ್ ಕುಮಾರ್, ಚಿರಂಜೀವಿ ಅವರನ್ನು ಸನ್ಮಾನಿಸಲಾಯಿತು.ಗೋಷ್ಠಿಯಲ್ಲಿ ಬಿ.ಆರ್.ಸಿ. ವೀಣಾ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ,ಪ್ರೊ.ಪುಟ್ಟರಂಗಪ್ಪ ಇದ್ದರು.

ವರದಿ: ಗಿರೀಶ್ ಕೆ‌ ಭಟ್, ತುರುವೇಕೆರೆ

Related Articles

Leave a Reply

Your email address will not be published. Required fields are marked *

Back to top button

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-includes/functions.php on line 5279

Notice: ob_end_flush(): failed to send buffer of zlib output compression (1) in /home2/sathyavi/public_html/wp-content/plugins/really-simple-ssl/class-mixed-content-fixer.php on line 107